News Karnataka Kannada
Thursday, May 02 2024
ತಮಿಳುನಾಡು

ಲೋಕಸಭೆ ಚುನಾವಣೆ: ಕೊಯಂಬತ್ತೂರಿನಲ್ಲಿ ಹಕ್ಕು ಚಲಾಯಿಸಿದ ಸದ್ಗುರು

Sadgur
Photo Credit :

ಕೊಯಂಬತ್ತೂರು:  543 ಲೋಕಸಭೆ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಇಂದು (ಏಪ್ರಿಲ್ 19) ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 10 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

1,600ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನವೂ ಶಾಂತ ರೀತಿಯಿಂದ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಇನ್ನು ಲೋಕಸಭೆ ಚುನಾವಣೆ ನಿಮಿತ್ತ ಇಶಾ ಫೌಂಡೇಶನ್​ನ ಸಂಸ್ಥಾಪಕರಾದ ವಾಸುದೇವ ಅವರು ತಮಿಳುನಾಡಿದ ಕೊಯಂಬತ್ತೂರಿನಲ್ಲಿ ಮತ ಚಲಾಯಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸದ್ಗುರುಗುಣಮುಖರಾಗುತ್ತಿದ್ದಾರೆ.

ಏಪ್ರಿಲ್​ 19ರಂದು ಬೆಳಗ್ಗೆ 07 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 06ಕ್ಕೆ ಮುಕ್ತಾಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು