ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಇದೀಗ ರಕ್ಷಣೆ ಕಾರ್ಯಚರಣೆ ಮಾಡಲಾಗುತ್ತಿದೆ. ಈ ಘಟನೆ ಲವ್ಡೇಲ್ ಬಳಿ ನಡೆದಿದೆ ಎಂದು ಹೇಳಲಾಗಿದೆ.
ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.