ನೀಟ್‌ ಪರೀಕ್ಷೆಯಲ್ಲಿ ಪುತ್ರ ಫೇಲ್‌, ಮಗನ ಆತ್ಮಹತ್ಯೆ ನೋವು ತಾಳಲಾರದೇ ತಂದೆಯೂ ಸಾವು

ಚೆನ್ನೈ: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಮಗ ಆತ್ಮಹತ್ಯೆ ಮಾಡಿಕೊಂಡ ಕೇವಲ ಒಂದೇ ದಿನದ ಅಂತರದಲ್ಲಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚೆನ್ನೈನಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ 2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎಂಬ ವಿದ್ಯಾರ್ಥಿ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಿರಲ್ಲ. ಇದರಿಂದ ತೀವ್ರವಾಗಿ ಮನನೊಂದಿದ್ದ ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿತ್ತು.

ಇದೇ ನೋವಿನಿಂದ ಜಗದೀಶ್ವರನ್‌ ತಂದೆಯೂ ಕೂಡ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಸಾವಿನ ದುಃಖ ತಾಳಲಾರದ ಸಲಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ತಿಳಿಹೇಳಿರುವ ಸಿಎಂ ಎಂಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

Ashika S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

13 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

30 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

57 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago