ತಮಿಳುನಾಡು: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತಿರುವಾರೂರ್ನಲ್ಲಿ ನಡೆದಿದೆ.
ಬಾಲಕಿ ಮೋನಿಷಾ (9) ಮೇಲೆ ಗೋಡೆ ಬಿದ್ದು ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.