News Karnataka Kannada
Wednesday, May 01 2024
ತಮಿಳುನಾಡು

ಜೀಪ್‌ ಬಸ್‌ ನಡುವೆ ಭೀಕರ ಅಪಘಾತ: ರಾಜ್ಯದ ಮೂವರು ಪೊಲೀಸರು ಸಾವು, ಇಬ್ಬರು ಗಂಭೀರ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ಮತ್ತು ಬಸ್‌ ನಡುವೆ ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. 
Photo Credit : NewsKarnataka

ತಮಿಳುನಾಡು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ಮತ್ತು ಬಸ್‌ ನಡುವೆ ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕರ್ನಾಟಕದ ಓರ್ವ ಪೊಲೀಸ್ ಅಧಿಕಾರಿ, KSRP ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್, ಹಾಗೂ ಕಾನ್ಸ್‌ಟೇಬಲ್ ವಿಠಲ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಸೇರಿ ಮೂವರು ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ.

ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಸದ್ಯ ಮೂವರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು