ಮದುವೆಯಾಗಲು ಒಪ್ಪದ ಗೆಳತಿಯನ್ನು ಹತ್ಯೆಮಾಡಿದ ಟ್ರಾನ್ಸ್​ಜೆಂಡರ್!

ಚೆನ್ನೈ: ಅಮಾನುಷ ಘಟನೆಯೊಂದು ತಮಿಳುನಾಡಿನಲ್ಲಿ ನಡೆದು ಹೋಗಿದ್ದು ಸ್ನೇಹಿತೆಗಾಗಿ ಗಂಡಾಗಿ ಬದಲಾಗಿದ್ದ ವ್ಯಕ್ತಿಯೊಬ್ಬ ತನ್ನ 25 ವರ್ಷದ ಬಾಲ್ಯದ ಗೆಳತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಸಾಫ್ಟ್ ವೇರ್ ಉದ್ಯೋಗಿ ನಂದಿನಿಯನ್ನ (25) ವೆಟ್ರಿಮಾರನ್ (26) ಪ್ರೀತಿಸುತ್ತಿದ್ದ. ಇಬ್ಬರೂ ಮಧುರೈನಲ್ಲಿ ಒಂದೇ ಪ್ರೌಢಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಎಂಟು ತಿಂಗಳ ಹಿಂದೆಯಷ್ಟೇ ಇಬ್ಬರೂ ಒಂದೇ ಸಾಫ್ಟ್​ವೇರ್​ ಕಂಪನಿಗೆ ಸೇರಿದ್ದರು. ಇಬ್ಬರು ಒಟ್ಟಿಗೆ ವಾಸಿಸುತ್ತಿದ್ದರಿಂದ ನಂದಿನಿಯನ್ನ ಮದುವೆಯಾಗುವುದಾಗಿ ವೆಟ್ರಿ ಮಾರನ್​ ಕೇಳಿಕೊಂಡಿದ್ದಾನೆ, ಆದರೆ ನಂದಿನಿ ಒಪ್ಪಿರಲಿಲ್ಲ. ಹಾಗಾಗಿ ಆಕೆಯನ್ನ ಕೊಲೆ ಮಾಡುವ ನಿರ್ಧಾರ ಕೈಗೊಂಡಿದ್ದಾನೆ.

ನಂದಿನಿ ಮದುವೆಗೆ ಒಪ್ಪದಿರಲು ಪ್ರಮುಖ ಕಾರಣ ವೇಟ್ರಿಮಾರನ್​ ಒಬ್ಬ ಟ್ರಾನ್ಸ್​ಜೆಂಡರ್. ಆತನ ಮೊದಲ ಹೆಸರು ಪಾಂಡಿ ಮಹೇಶ್ವರಿ. ಈ ಇಬ್ಬರು ಚಿಕ್ಕಂದಿನಿಂದಲೂ ಒಟ್ಟಿಗೆ ಓದಿದ್ದರು. ಮಹೇಶ್ವರಿ ವೇಟ್ರಿ ಮಾರನ್​ ಅಗಿ ಬದಲಾದ ನಂತರ ನಂದಿನಿಯನ್ನು ವಿವಾಹವಾಗಲು ಬಯಸಿದ್ದಾನೆ. ಆದರೆ ನಂದಿನಿ ಅದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಕಳೆದ 6 ತಿಂಗಳಿನಿಂದ ಬೇರೆ ಯುವಕನ ಜೊತೆಗೆ ಸಲುಗೆಯಿಂದ ವರ್ತಿಸಲು ಶುರು ಮಾಡಿದ್ದಳು. ಹಾಗಾಗಿ ಆಕೆಯನ್ನು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Ramya Bolantoor

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

10 seconds ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

24 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

38 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago