News Karnataka Kannada
Sunday, May 19 2024
ತಮಿಳುನಾಡು

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನಡೆದಿದೆ.
Photo Credit : NewsKarnataka

ಚೆನ್ನೈ: ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನಡೆದಿದೆ.

ರಾಟ್‌ವೀಲರ್ ದಾಳಿಗೊಳಗಾದ ಸುದಕ್ಷ ಎಂಬ ಐದು ವರ್ಷದ ಬಾಲಕಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ನಾಯಿಗಳ ಮಾಲೀಕ ಅವುಗಳನ್ನು ಲೂಸ್ ಬಿಟ್ಟ ಪರಿಣಾಮ ನಾಯಿಗಳು ಬಾಲಕಿಯ ಮೇಲೆರಗಿದೆ. ದಾಳಿ ನಡೆದ ತಕ್ಷಣ ಬಾಲಕಿಯ ತಾಯಿ ಆಕೆಯನ್ನು ರಕ್ಷಿಸಲು ಧಾವಿಸಿದ್ದಾರೆ.

ನಾವು ಮಾಲೀಕರನ್ನು ಬಂಧಿಸಿದ್ದೇವೆ ಮತ್ತು ನಾಯಿಗಳನ್ನು ನೋಡಿಕೊಳ್ಳುವ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶೇಖರ್ ದೇಶಮುಖ್ ತಿಳಿಸಿದ್ದಾರೆ.

ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಯಿಗಳ ಮಾಲೀಕರನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು