News Karnataka Kannada
Friday, May 17 2024
ತಮಿಳುನಾಡು

ವಿಡಿಯೋ: ಸೂಪರ್‌ ಸ್ಟಾರ್‌ ಮನೆಗೂ ನುಗ್ಗಿದ ನೀರು

Video: Water enters superstar's house
Photo Credit :

ಚೆನ್ನೈ: ಮೈಚಾಂಗ್ ಚಂಡಮಾರುತದಿಂದ ತಮಿಳುನಾಡಿನ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಅದೇ ರೀತಿ ಚೆನ್ನೈನ ಪೋಯಸ್ ಗಾರ್ಡನ್ ಪ್ರದೇಶದಲ್ಲಿರುವ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರ ಮನೆಗೆ ನೀರು ನುಗ್ಗಿದೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ರಜನಿಕಾಂತ್ ಮನೆ ಬಳಿ ನೀರು ನಿಂತಿರುವುದು ಕಂಡು ಬಂದಿದೆ. ಮನೆ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಚಂಡಮಾರುತದ ಸಮಯದಲ್ಲಿ ರಜನಿಕಾಂತ್ ಮತ್ತು ಅವರ ಕುಟುಂಬ ಚೆನ್ನೈನಲ್ಲಿ ಇರಲಿಲ್ಲ. ಅಭಿಮಾನಿಯೊಬ್ಬರು ಈ ವಿಡಿಯೋನ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವರದಿಗಳ ಪ್ರಕಾರ, ‘ತಲೈವರ್ 170′ ಚಿತ್ರದ ಶೂಟಿಂಗ್‌ ಕೆಲಸಗಳ ಕಾರಣದಿಂದ ಅವರು ಮನೆಯಲ್ಲಿ ಇರಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು