ಪುತ್ರನ ಕಾಲೇಜು ಫೀಸ್‌ ಹೊಂದಿಸಲು ಬಸ್ಸಿನಡಿಗೆ ಬಿದ್ದು ಸತ್ತ ಮಹಿಳೆ

ಚೆನ್ನೈ: ತಾನು ಸತ್ತರೆ ಮಗನ ಕಾಲೇಜು ಫೀಸನ್ನು ಸರಕಾರ ಭರಿಸುತ್ತದೆಂದು ಯಾರೋ ಹೇಳಿದ ಮಾತು ನಂಬಿದ ಬಡ ತಾಯೊಯೊಬ್ಬಳು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಹೇಗೆ ನಡೆಯಿತು: ಸೇಲಂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಪಾಪಾತಿ (45) ಜೀವ ಕಳೆದುಕೊಂಡಿರುವ ಮಹಿಳೆ. ಜೂ. 28ರಂದು ಮಹಿಳೆ ಆತ್ಮಾಹುತಿ ಮಾಡಿಕೊಂಡಿದ್ದರೂ ಸಾವಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ.

15 ವರ್ಷಗಳಿಂದ ಗಂಡನಿಂದ ದೂರವಾಗಿ ಮಗನೊಂದಿಗೆ ವಾಸವಾಗಿರುವ ಮಹಿಳೆ ಬಡತನದಿಂದಾಗಿ ಬಹಳ ಕಷ್ಟ ಅನುಭವಿಸುತ್ತಿದ್ದರು. ಒಬ್ಬನೇ ಮಗನ ಭವಿಷ್ಯ ಉಜ್ವಲವಾಗಬೇಕೆಂದು ಬಯಸುತ್ತಿದ್ದ ಮಹಿಳೆಗೆ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಆಗ ಯಾರೋ ಆಕೆಗೆ ನೀನು ಅಪಘಾತದಲ್ಲಿ ಸತ್ತರೆ ಸರಕಾರ ಕೊಡುವ ಪರಿಹಾರದ ಹಣದಲ್ಲಿ ಮಗನ ಕಾಲೇಜು ಫೀಸ್‌ ಕಟ್ಟಬಹುದು, ಅವನ ಕಷ್ಟಗಳು ದೂರವಾಗುತ್ತವೆ ಎಂದು ಹೇಳಿದ್ದಾರೆ.

ಇದನ್ನು ನಿಜವೆಂದು ನಂಬಿದ ಮಹಿಳೆ ವೇಗವಾಗಿ ಬರುತ್ತಿದ್ದ ಬಸ್ಸಿನ ಮುಂದೆ ಹೋಗಿ ನಿಂತಿದ್ದಾಳೆ. ಚಾಲಕನಿಗೆ ವೇಗ ನಿಯಂತ್ರಿಸಲು ಸಾಧ್ಯವಾಗದೆ ಬಸ್‌ ಆಕೆಯ ಮೇಲೆ ಹರಿದು ಹೋಗಿದೆ. ಬದುಕಿನ ಕಷ್ಟಗಳಿಂದ ಹತಾಶರಾಗಿದ್ದ ಈ ಮಹಿಳೆ ಬಸ್ಸಿನಡಿಗೆ ಬೀಳುವುದಕ್ಕೂ ಕೆಲವು ನಿಮಿಷ ಮೊದಲು ಮತ್ತೊಂದು ಬಸ್ಸಿ ನಡಿಗೆ ಬೀಳುವ ಪ್ರಯತ್ನ ಮಾಡಿದ್ದರು. ಆದರೆ ಆಗ ಸ್ಕೂಟರ್‌ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಎದ್ದು ಮತ್ತೊಂದು ಬಸ್ಸಿನಡಿಗೆ ಬಿದ್ದಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

Ashika S

Recent Posts

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

16 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

26 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago