ಹೈದರಾಬಾದ್ : ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.
ಇಡೀ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಲೆನೋವಾಗಿದ್ದ ಆರೋಪಿ ಪತ್ತೆ ಕಾರ್ಯದಲ್ಲಿ ಕೊನೆಗೂ ಪೊಲೀಸರು ವಿಫಲರಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಲ್ಲಂಕೊಂಡ ರಾಜು ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.
ಸೈದಾಬಾದ್ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ಪಲ್ಲಂಕೊಂಡ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಉನ್ನತ ಮೂಲಗಳು ಮಾಹಿತಿ ನೀಡಿದ್ದು, ರೈಲಿಗೆ ತಲೆಕೊಟ್ಟು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.