Categories: ತೆಲಂಗಾಣ

ಓಮಿಕ್ರಾನ್ ಭೀತಿ: ಮಾಸ್ಕ್ ಕಡ್ಡಾಯ ನಿಯಮ ಜಾರಿಗೊಳಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್ : ಕೊರೋನಾ ಹೊಸ ರೂಪಾಂತರಿದ ಓಮಿಕ್ರಾನ್ ಭಾರತದಲ್ಲೂ ಪತ್ತೆಯಾಗಿದ್ದು, ವೈರಸ್ ವೇಗವಾಗಿ ಹರಡುತ್ತದೆ ಎಂಬ ಕಾರಣದಿಂದ ತೆಲಂಗಾಣ ಸರ್ಕಾರ ಗುರುವಾರದಿಂದ ಮಾಸ್ಕ್ ಕಡ್ಡಾಯ ನಿಯಮವನ್ನು ಮತ್ತೆ ಜಾರಿಗೊಳಿಸಿದೆ. ಮಾಸ್ಕ್ ಧರಿಸದವರಿಗೆ 1000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕರು ಪ್ರಕಟಿಸಿದ್ದಾರೆ.

“ನಾಗರಿಕರು ಮಾಸ್ಕ್ ಧರಿಸದಿರುವಂತೆ ನೋಡಿಕೊಳ್ಳಲು ತೆಲಂಗಾಣ ಆರೋಗ್ಯ ಇಲಾಖೆ ಜಾರಿ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸದವರಿಗೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಇದು ಹೊಸ ನಿಯಮ ಅಲ್ಲ ಎಂದು” ತೆಲಂಗಾಣ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ ಜಿ ಶ್ರೀನಿವಾಸ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರತಿಯೊಬ್ಬರು ತಮ್ಮ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಹೊಂದಿರಬೇಕು. ಅದನ್ನು ಆರೋಗ್ಯ ಸಿಬ್ಬಂದಿ ಪರಿಶೀಲಿಸುತ್ತಾರೆ ಎಂದು ಡಾ. ರಾವ್ ಹೇಳಿದ್ದಾರೆ.

“ಜನರು ತಮ್ಮ ಕೋವಿಡ್ ಲಸಿಕೆ ಪ್ರಮಾಣಪತ್ರಗಳನ್ನು ಜೊತೆಯಲ್ಲಿ ಕೊಂಡೊಯ್ಯಬೇಕು ಎಂದು ನಾವು ವಿನಂತಿಸುತ್ತೇವೆ. ತೆಲಂಗಾಣ ಆರೋಗ್ಯ ತಂಡಗಳು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುತ್ತವೆ ಮತ್ತು ಲಸಿಕೆ ಪ್ರಮಾಣಪತ್ರಗಳನ್ನು ಪರಿಶೀಲಿಸುತ್ತಾರೆ. ಇದು ಎಚ್ಚರಿಕೆಯ ಕ್ರಮವಾಗಿದೆ ಮತ್ತು ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸುತ್ತದೆ. ನಮ್ಮ ಕಾರ್ಯಸೂಚಿಯು ಜನರ ಆರೋಗ್ಯ ಮತ್ತು ಜೀವನವನ್ನು ಕಾಪಾಡುವುದು” ಎಂದು ಅವರು ತಿಳಿಸಿದ್ದಾರೆ.

Gayathri SG

Recent Posts

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

33 seconds ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

23 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

34 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

54 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

55 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago