Categories: ತೆಲಂಗಾಣ

ತವರಿನ ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದ ಅಕ್ಕ

ತೆಲಂಗಾಣ : ತವರಿನ ಆಸ್ತಿಗಾಗಿ ಮಹಿಳೆಯೊಬ್ಬಳು ತನ್ನ ತಂಗಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

36 ವರ್ಷದ ವರಲಕ್ಷ್ಮಿ ಮೃತ ಮಹಿಳೆ. ವಾಡಿಯಾರಾಮ್ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ವರಲಕ್ಷ್ಮಿ ಪತಿಯಿಂದ ದೂರವಾಗಿದ್ದಳು. ವರಲಕ್ಷ್ಮಿಗೆ ರಾಜೇಶ್ವರಿ ಎಂಬ ಸಹೋದರಿಯಿದ್ದು, ಆಕೆ ಕೂಡ ವಿಚ್ಛೇದಿತಳು.

ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದ್ದು, ಪಾಲಕರ ಬಳಿ 5 ಎಕರೆ ಜಮೀನಿತ್ತು. ಈ ಜಮೀನಿಗಾಗಿ  ಅಕ್ಕ-ತಂಗಿ ನಡುವೆ ಕಲಹ ಆರಂಭವಾಗಿದೆ. ರಾಜೇಶ್ವರಿ ತನ್ನ ಸಹೋದರಿ ವರಲಕ್ಷ್ಮಿ ಮನೆಗೆ ಬಂದು ಆಸ್ತಿ ವಿಚಾರವಾಗಿ ಮಾತನಾಡಿದ್ದಾಳೆ. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ್ದು, ವರಲಕ್ಷ್ಮಿಗೆ ಪೆಟ್ರೋಲ್ ಸುರಿದು ರಾಜೇಶ್ವರಿ ಬೆಂಕಿ ಹಚ್ಚಿದ್ದಾಳೆ. ಈ ವೇಳೆ ರಾಜೇಶ್ವರಿಗೂ ಬೆಂಕಿ ತಗುಲಿದೆ. ತೀವ್ರವಾದ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿ ತಲುಪಿದ್ದ ವರಲಕ್ಷ್ಮಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇತ್ತ ರಾಜೇಶ್ವರಿ ಕೂಡ ಶೇ.80ರಷ್ಟು ಸುಟ್ಟಗಾಯಗಳಿಂದ ನರಳುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

11 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

25 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

37 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

53 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago