News Karnataka Kannada
Monday, May 13 2024
ತೆಲಂಗಾಣ

ತೆಲಂಗಾಣದಲ್ಲಿ ಜ. 8 ರಿಂದ 16 ರವರೆಗೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಿದ ಸಿಎಂ

Childrens
Photo Credit :

ಹೈದರಾಬಾದ್ : ತೆಲಂಗಾಣದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಲಾಗಿದೆ. ಜನವರಿ 8 ರಿಂದ 16 ರವರೆಗೆ ರಜೆ ಘೋಷಣೆ ಮಾಡಬೇಕೆಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನಿರ್ದೇಶನ ನೀಡಿದ್ದಾರೆ.

ಕೊರೊನಾ ಸೋಂಕು ಮತ್ತು ರೂಪಾಂತರ ಒಮಿಕ್ರಾನ್ ತೀವ್ರ ಏ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹಲವು ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ. ಶಾಲೆ, ಕಾಲೇಜ್ ಗಳಿಗೆ ರಜೆ ನೀಡಲಾಗಿದೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕನಕ್ಕಾಗಿ ಸೋಮವಾರ ತಡರಾತ್ರಿ ಪ್ರಗತಿ ಭವನದಲ್ಲಿ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಜ್ಯದಲ್ಲಿ ಲಾಕ್‌ ಡೌನ್ ಹೇರುವ ಅಗತ್ಯವಿಲ್ಲ ಎಂದು ಸಭೆ ಅಭಿಪ್ರಾಯಪಟ್ಟಿದೆ. ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ ಡೌನ್‌ ಹೇರುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಬೆಡ್‌ಗಳು, ಆಕ್ಸಿಜನ್ ಬೆಡ್‌ಗಳು, ಔಷಧಗಳು ಮತ್ತು ಪರೀಕ್ಷಾ ಕಿಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು