News Karnataka Kannada
Friday, May 03 2024
ತೆಲಂಗಾಣ

ತೆಲಂಗಾಣದಲ್ಲಿ ಭಾನುವಾರ ಮತ್ತೆ ಮೂವರಲ್ಲಿ ಓಮೈಕ್ರಾನ್ ದೃಢ

Omicrone
Photo Credit :

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ಮತ್ತೆ ಮೂವರಲ್ಲಿ ಓಮೈಕ್ರಾನ್ ದೃಢಪಟ್ಟಿವೆ. ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ 248 ಪ್ರಯಾಣಿಕರು ವಿದೇಶಗಳಿಂದ ಬಂದಿಳಿದಿದ್ದರು. ಇವರಲ್ಲಿ ಇಬ್ಬರಿಗೆ ಕೋವಿಡ್-19 ದೃಢಪಟ್ಟಿದೆ.ಸೋಂಕಿತರ ಪೈಕಿ ಇಬ್ಬರು ವಿದೇಶದಿಂದ ಬಂದಿದ್ದಾರೆ ಮತ್ತು ಮತ್ತೊಬ್ಬರು ಅವರ ಸಂಪರ್ಕಕ್ಕೆ ಬಂದಿದ್ದರು.

ಸೋಂಕಿತರಿಬ್ಬರು ಸೇರಿ 16 ಜನರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಆರೋಗ್ಯ ಬುಲೆಟಿನ್ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಯಿಂದ ಸೋಂಕಿತರಾದವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ.

ಡಿಸೆಂಬರ್ 1ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11.493 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 85 ಜನರಿಗೆ ಕೋವಿಡ್ ದೃಢಪಟ್ಟಿತ್ತು ಮತ್ತು ಇವರಲ್ಲಿ 45 ಜನರಲ್ಲಿ ಓಮೈಕ್ರಾನ್ ಪತ್ತೆಯಾಗಿತ್ತು. ಸದ್ಯ 10 ಜನರು ಚೇತರಿಸಿಕೊಂಡಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು