News Karnataka Kannada
Monday, May 06 2024
ತೆಲಂಗಾಣ

ತೆಲಂಗಾಣದಲ್ಲಿ ಭೀಕರ ರಸ್ತೆಅಪಘಾತ,6 ಮಂದಿ ಸ್ಥಳದಲ್ಲೇ ಸಾವು

Accident
Photo Credit :

ಹೈದರಾಬಾದ್ : ಕಾಮರೆಡ್ಡಿ ಜಿಲ್ಲೆಯ ಬಿಚ್ಚುಂದಾ ಮಂಡಲದ ಸಂಗರೆಡ್ಡಿ-ನಾಂದೇಡ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇತರ ಆರು ಜನರು ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ನಿಜಾಮಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೊಯೊಟಾ ಕ್ವಾಲಿಸ್ ನಲ್ಲಿ 12 ಜನರು ಮಹಾರಾಷ್ಟ್ರಕ್ಕೆ ಪ್ರಯಾಣಿಸುತ್ತಿದ್ದರು.

ಈ ವೇಳೆ ನಿಯಂತ್ರಣ ಕಳೆದುಕೊಂಡ ಕ್ವಾಲಿಸ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು