Categories: ತೆಲಂಗಾಣ

ತೆಲಂಗಾಣದ ವೈದ್ಯಕೀಯ ಸಂಸ್ಥೆಯ 43 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ

ಹೈದರಾಬಾದ್ : ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್‌ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಚಾರವಾಗಿ ಸುದ್ದಿವಾಹಿನಿ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆ ನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್‌ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ’ ಎಂದು ಡಾ.ಜುವೇರಿಯಾ ಹೇಳಿದ್ದಾರೆ.

24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Gayathri SG

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

43 seconds ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

38 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

41 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

55 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

55 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago