ತೆಲಂಗಾಣ : ಯಾದದ್ರಿ ಭುವನಗಿರಿ ಜಿಲ್ಲೆಯಲ್ಲಿ ದುರಂತ ಸಂಭವಿಸಿದೆ. ಯಾದಗಿರಿಗುಟ್ಟಾದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.
ಕುಸಿದ ಕಟ್ಟಡವನ್ನು ಸುಮಾರು 30 ವರ್ಷಗಳ ಹಿಂದೆ ಕಟ್ಟಲಾಗಿದ್ದು, ಶಿಥಿಲಗೊಂಡಿತ್ತು ಎಂದು ಮಾಹಿತಿ ದೊರೆತಿದೆ.
ಕುಸಿದ ಕಟ್ಟಡದಲ್ಲಿ ಹಲವು ಕುಟುಂಬಗಳು ವಾಸಿಸುತ್ತಿದ್ದವು, ಅಂಗಡಿಗಳು ಇತ್ತು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ತೆರವುಗೊಳಿಸಲು ಸ್ಥಳೀಯರು ಪೊಲೀಸರೊಂದಿಗೆ ಕೈ ಜೋಡಿಸಿದರು. ಗಾಯಾಳುಗಳನ್ನು ಭುವನಗಿರಿ ಏರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.