News Karnataka Kannada
Monday, May 06 2024
ತೆಲಂಗಾಣ

ತೆಲಂಗಾಣ: ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಸಾವು

Accident
Photo Credit :

ತೆಲಂಗಾಣ: ತೆಲಂಗಾಣ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದು, ಉಳಿದಂತೆ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.ಟೊಯೊಟಾ ಕ್ವಾಲಿಸ್ನಲ್ಲಿ ಎರಡು ಕುಟುಂಬದ 12 ಸದಸ್ಯರು ಮಹಾರಾಷ್ಟ್ರದ ನಾಂದೇಡ್ನಲ್ಲಿರುವ ಹಜರತ್ ಶಾ ಕಾಮಿಲ್ ದಾದ್ ದರ್ಗಾಗೆ ಪ್ರಯಾಣಿಸುತ್ತಿದ್ದರು.

ಇವರೆಲ್ಲರೂ ಹೈದರಾಬಾದ್ನ ಮಲಕ್ಪೇಟ್ ಮತ್ತು ಚಾದರ್ಘಾಟ್ನ ನಿವಾಸಿಗಳು ಎಂದು ಗುರುತಿಸಲಾಗಿದೆ.

  ನಿಯಂತ್ರಣ ಕಳೆದುಕೊಂಡಿರುವ ಕ್ವಾಲಿಸ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದ್ದು, ಚಾಲಕ ಸಹ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾನೆ. ಗಾಯಗೊಂಡವರನ್ನ ಬಾನ್ಸವಾಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾಗಿರುವ ಸಂಬಂಧಿಕರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು