ಹೈದರಾಬಾದ್: ತೆಲಂಗಾಣದ ರಾಜಣ್ಣ-ಸಿರ್ಸಿಲ್ಲಾ ಜಿಲ್ಲೆಯ ಮನೈರ್ ನದಿಯಲ್ಲಿ ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಹುಡುಗರ ಗುಂಪೊಂದು ನದಿಯ ಆಳವನ್ನು ಆರಿಯದೇ ನೀರಿಗೆ ಧುಮುಕಿದ್ದರು. ಐವರ ಮೃತದೇಹ ಪತ್ತೆಯಾಗಿದ್ದು, ಒಬ್ಬರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿರ್ಸಿಲ್ಲಾ ನಗರದ ಹೊರವಲಯದಲ್ಲಿ ಸೋಮವಾರ ಈ ಘಟನೆ ನಡೆದಿದೆ.