ತೆಲಂಗಾಣ : ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.ಸಿ.ಆರ್.ಪಿ.ಎಫ್., ಎಸ್ ಐ ಉಮೇಶ್ ಹಾಗೂ ಯೋಧ ಸ್ಟೀಫನ್ ಮಧ್ಯೆ ಯಾವುದೋ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ.
ಈ ಸಂದರ್ಭದಲ್ಲಿ ಕೋಪದಲ್ಲಿದ್ದ ಸ್ಪೀಫನ್ ತನ್ನ ಗನ್ ನಿಂದಲೇ ಎಸ್ ಐ ಮೇಲೆ ಗುಂಡು ಹಾರಿಸಿದ್ದಾನೆ. ಆ ನಂತರ ಅದೇ ಗನ್ ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಈ ಘಟನೆ ರಾಜ್ಯದ ವೆಂಕಟಾಪುರಂ ಎಂಬ ಹಳ್ಳಿಯಲ್ಲಿದ್ದ ವೆಂಕಟಾಪುರಂ ಮಂಡಲ ಕೇಂದ್ರ 39 ಬೆಟಾಲಿಯನ್ ನಲ್ಲಿ ನಡೆದಿದ್ದು, ಈ ಕುರಿತು ಜಿಲ್ಲಾ ಎಸ್ ಪಿ ಸಂಗ್ರಾಮ್ ಸಿಂಗ್ ಮಾಹಿತಿ ನೀಡಿದ್ದಾರೆ.
ಗುಂಡು ಹಾರಿಸುತ್ತಿದ್ದಂತೆ ಎಸ್ ಐ ಸಾವನ್ನಪ್ಪಿದ್ದು, ಸ್ಟೀಫನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…