ಸಂಗಾರೆಡ್ಡಿ (ಡಿ. 20) : ದಂಪತಿಗಳು ದಾರುಣ ಅಂತ್ಯ ಕಂಡಿದ್ದಾರೆ. ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಸಂಗಾರೆಡ್ಡಿ ಜಿಲ್ಲೆಯ ಫಾರ್ಮ್ಹೌಸ್ನಲ್ಲಿ ದಂಪತಿ ಸಾವನ್ನಪ್ಪಿದ್ದಾರೆ.
ಮೃತರನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ (46) ಮತ್ತು ದೇವಿ (38) ಎಂದು ಗುರುತಿಸಲಾಗಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ದಂಪತಿ ಸಾವು ಕಂಡಿದ್ದಾರೆ
ಶನಿವಾರ ಸಂಜೆ ಶ್ರೀನಿವಾಸ್ ಕರೆಂಟ್ ಸ್ವಿಚ್ ಆನ್ ಮಾಡಲು ಮುಂದಾದಾಗ ಶಾಕ್ ತಗುಲಿದೆ. ಗಂಡನ ಉಳಿಸಲು ಹೋದ ಪತ್ನಿ ಸಹ ದಾರುಣ ಅಂತ್ಯ ಕಂಡಿದ್ದಾರೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಭಾನುವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ದಂಪತಿಗೆ ಮೂವರು ಮಕ್ಕಳಿದ್ದು ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೆ.