ಹೈದರಾಬಾದ್: ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ನಾದರ್ ಗುಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಹೈದರಾಬಾದ್ನ ಸಂತೋಷ್ ನಗರದ ನಿವಾಸಿಗಳಾದ ಖುದ್ದೂಸ್ ಪಾಷಾ (37), ಫಾತಿಮಾ (28), ಮೆಹರ್ (9) ಮತ್ತು ಫಿರ್ದೋಶ್ ಬೇಗಂ (6) ಎಂದು ಗುರುತಿಸಲಾಗಿದೆ.
ಹಣಕಾಸು ವಿಚಾರವಾಗಿ ಸೋಮವಾರ ಖುದ್ದೂಸ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಇವರ ಜಗಳ ತಾರಕಕ್ಕೇರಿದ್ದು, ಖುದ್ದೂಸ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಕೂರ್ಮಲಗುಡ ಹೊಂಡಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಈ ಮೂವರನ್ನು ಕೆರೆಗೆ ತಳ್ಳಿ, ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಕೆಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವಾ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹಗಳನ್ನು ಹೊರ ತೆಗೆದಿದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…