News Karnataka Kannada
Wednesday, May 08 2024
ತೆಲಂಗಾಣ

ಹೈದರಾಬಾದ್‌: ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣು

Suicide
Photo Credit : IANS

ಹೈದರಾಬಾದ್‌ : ಚೈತನ್ಯಪುರಿಯಲ್ಲಿ 32 ವರ್ಷದ ಮಹಿಳೆಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತಳನ್ನ ತೋಟ ಸುಷ್ಮಾ ಎಂದು ಗುರುತಿಸಿದ್ದು, ತನ್ನ ಗಂಡನ ಕಿರುಕುಳದಿಂದ ಆಕೆ ಜೀವವನ್ನ ತೆಗೆದುಕೊಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

2018ರಲ್ಲಿ ಮದುವೆಯಾದ ಸುಷ್ಮಾ ಗಂಡನೊಂದಿಗೆ, ಹೈದರಾಬಾದ್‌ನ ಕೊತಪೇಟ್‌ನಲ್ಲಿ ವಾಸಿಸುತ್ತಿದ್ದಳು. ವರದಿಗಳ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ಅವರ ದಾಂಪತ್ಯ ಹದಗೆಟ್ಟಿತ್ತು. ಮಹಿಳೆಯ ಪತಿ ಆಗಾಗ್ಗೆ ಕಿರುಕುಳ ನೀಡುತ್ತಿದ್ದರು ಮತ್ತು ಸಣ್ಣಪುಟ್ಟ ವಿಷಯಗಳಿಗೆ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇದು ಕೊಲೆಯೊ ಆತ್ಮಹತ್ಯೆಯೊ‌ ಎಂದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಮಹಿಳೆಯ ಪತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು