Categories: ತೆಲಂಗಾಣ

ಹೈದರಾಬಾದ್​: ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವತಿ

ಹೈದರಾಬಾದ್​ : ‘ಜೀವನದಲ್ಲಿ ಇವನಿಂದ ಸೋತುಬಿಟ್ಟೆ, ಮತ್ತೆ ಮೋಸಹೋದೆ.. ಎಲ್ಲರೆದುರು ಪ್ರಶ್ನೆಯಾಗಿಯೇ ಉಳಿದುಕೊಂಡೆ. ನಾನಿನ್ನು ಬದುಕಿದ್ದು ಪ್ರಯೋಜನವಿಲ್ಲ’ ಎಂದು ಡೆತ್​ನೋಟ್​ ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯ ಪೆದ್ದಮುಪ್ಪರಮ್ ಗ್ರಾಮದಲ್ಲಿ ನಡೆದಿದೆ.

ಶಾರದಾ ಮತ್ತು ಪೊಲೆಪಲ್ಲಿ ವೆಂಕಣ್ಣ ಎಂಬ ದಂಪತಿಯ ಮಗಳಾದ 22 ವರ್ಷದ ಶರಣ್ಯಾ ಪ್ರಿಯಕರನಿಂದ ಮೋಸ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾಯುವ ಮುನ್ನ ಡೆತ್​ನೋಟ್​ ಬರೆದಿಡುವ ಜತೆಗೆ, ಪ್ರಿಯಕರನ ಚಿತ್ರವನ್ನು ಕೈಯಿಂದ ಬಿಡಿಸಿರುವ ಶರಣ್ಯಾ, ನಾನು ಸಾಯುವುದಕ್ಕೆ ಇವನೇ ಕಾರಣ ಎಂದು ಪರೋಕ್ಷವಾಗಿ ತಿಳಿಸಿದ್ದಾಳೆ.

ಇವನಿಂದ ಪುನಃ ಮೋಸ ಹೋಗಿದ್ದೇನೆ. ನನಗೆ ಸಾಯುವುದು ಬಿಟ್ಟು ಬೇರೆ ದಾರಿ ಇಲ್ಲ. ಏನು ಮಾಡಬೇಕೆಂಬುದು ಗೊತ್ತಾಗುತ್ತಿಲ್ಲ. ನಿಮ್ಮ ಮುಂದೆ ಮುಖ ತೋರಿಸಲು ಆಗುತ್ತಿಲ್ಲ. ಇಷ್ಟೆಲ್ಲಾ ಆದ ಮೇಲೆ ಬದುಕಿದ್ದು ಪ್ರಯೋಜನವಿಲ್ಲ ಎಂದು ಬರೆದಿರುವ ಯುವತಿ, ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶರಣ್ಯಾ ಟೈಲರಿಂಗ್​ ವೃತ್ತಿ ನಡೆಸುತ್ತಿದ್ದಳು. ಈಕೆಗೆ​ ಅದೇ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಚಾಲಕನೂ, ಪಕ್ಷವೊಂದರ ಮುಖಂಡನೂ ಆಗಿರುವ ಯುವಕನ ಜತೆ ಸ್ನೇಹ ಬೆಳೆದಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ ಮದುವೆಯಾಗಲು ಹೇಳಿದಾಗ ಯುವಕ ನಿರಾಕರಿಸಿದ್ದಾನೆ. ಇದು ಗ್ರಾಮದ ಪಂಚಾಯಿತಿ ವರೆಗೂ ಹೋಗಿ ಪಂಚಾಯಿತಿಯ ಮುಖಂಡರು ಮದುವೆಗೆ ಒಪ್ಪಿಸಿದ್ದರು. ಅಲ್ಲಿ ಮದುವೆಗೆ ಒಪ್ಪುವುದಾಗಿ ಹೇಳಿಕೆ ಕೊಟ್ಟಿದ್ದ ಯುವಕ, ತನಗೆ ಆರು ತಿಂಗಳು ಬೇಕು ಎಂದು ಕೇಳಿದ್ದ.

ಹೀಗೆ ಹೇಳುತ್ತಿದ್ದುದು ತನಗೆ ಮೋಸ ಮಾಡಲು ಎಂದು ತಿಳಿದ ಶರಣ್ಯಾ, ಇನ್ನು ಬದುಕಿದ್ದು ಪ್ರಯೋಜನವಿಲ್ಲ ಎಂದು ಅಂದುಕೊಂಡು ಡೆತ್​ನೋಟ್​ ಜತೆಗೆ ಆತನ ಚಿತ್ರ ಬಿಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಯುವಕನೇ ಕಾರಣ ಎಂದು ಆಕೆಯ ಕುಟುಂಬಸ್ಥರು ಯುವಕನ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಯುವತಿ ಸಾವಿನ ಬಗ್ಗೆ ಲಿಖಿತ ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

4 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

14 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

26 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

38 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

41 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

56 mins ago