ತೆಲಂಗಾಣ

ಹೈದರಾಬಾದ್ ನಲ್ಲಿ ತಲೆಎತ್ತಲಿದೆ 216 ಅಡಿ ಎತ್ತರದ ರಾಮಾನುಜರ ಪ್ರತಿಮೆ: ಫೆ. 5 ರಂದು ಪ್ರಧಾನಿ ಮೋದಿಯಿಂದ ಅನಾವರಣ

ಹೈದರಾಬಾದ್ ನ ಮುಂಚಿಂತಲ್‌ ಪ್ರದೇಶದಲ್ಲಿರುವ ಚಿನ್ನ ಜೀಯರ್ ಆಶ್ರಮ , ಫೆಬ್ರವರಿ 2 ರಿಂದ 14 ರವರೆಗೆ ರಾಮಾನುಜಾಚಾರ್ಯರ 1,000ನೇ ವಾರ್ಷಿಕೋತ್ಸವ ಬಹಳ ಸಂಭ್ರಮದಿಂದ ನಡೆಸಲು ಸಜ್ಜಾಗುತ್ತಿದ್ದು.

ಈ ವೇಳೆ ಇಲ್ಲಿ 216 ಅಡಿ ಎತ್ತರದಲ್ಲಿ ನಿರ್ಮಿಸಲಾದ ರಾಮಾನುಜರ ಪ್ರತಿಮೆ ಅಥವಾ ‘ಸಮಾನತೆಯ ಪ್ರತಿಮೆ’ಯನ್ನು ಅನಾವರಣಗೊಳಲ್ಲಿದೆ.

ವಿಶೇಷ ಅಂದರೆ ಖುದ್ದು ಪ್ರಧಾನಿ ಮೋದಿ ಅವರೇ ಫೆಬ್ರವರಿ 5 ರಂದು ಈ ಪ್ರತಿಮೆ’ಯನ್ನು ಅನಾವರಣಗೊಳಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ದೃಢಪಡಿಸಿದ್ದು, ಪ್ರಧಾನಿಯವರ ವೇಳಾಪಟ್ಟಿಯಲ್ಲಿ ಫೆಬ್ರವರಿ 5 ರಂದು ಮಧ್ಯಾಹ್ನ 3.30ಕ್ಕೆ ಮೋದಿ ಆಶ್ರಮವನ್ನು ತಲುಪಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದೆ.

ಬಳಿಕ ಅಲ್ಲಿ ನಡೆಯಿತು ಹೋಮಗಳಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದು, ಇವರಿಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಸಾಥ್ ನೀಡಲಿದ್ದಾರೆ.

ರಾಮಾನುಜರ ಪ್ರತಿಮೆಯು ಸುಮಾರು ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಈ ಪ್ರದೇಶದಲ್ಲಿ 108 ಮಾದರಿ ದೇವಾಲಯಗಳು ಮತ್ತು 144 ಯಾಗ ಶಾಲೆಗಳಿವೆ. ಇನ್ನು ಪ್ರತಿ ಯಾಗ ಶಾಲೆಯಲ್ಲಿ ಒಂಬತ್ತು ಹೋಮ ಕುಂಡಗಳಿರುತ್ತವೆ.

ಫೆ.5 ರಂದು ನಡೆಯುವ ಈ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಸುಮಾರು 5,000 ಪುರೋಹಿತರು ಮತ್ತು ವೇದ ಪಂಡಿತರು ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಮಾನುಜರು 11ನೇ ಶತಮಾನದ ಸಮಾಜ ಸುಧಾರಕ, ಸಂತ, ವಿದ್ವಾಂಸ ಹಾಗೂ ದಾರ್ಶನಿಕ ಮತ್ತು ಶ್ರೀ ವಿಶಿಷ್ಟಾದ್ವೈತ ಸಿದ್ಧಾಂತದ ಪ್ರತಿಪಾದಕರು ಆಗಿದ್ದರು.

Sneha Gowda

Recent Posts

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

2 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

12 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

32 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

42 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 hours ago