ಹೈದರಾಬಾದ್(ಪಿಟಿಐ) : ಇಲ್ಲಿನ ವಿಕಾರಾಬಾದ್ ಜಿಲ್ಲೆಯ ಅಂಗಡಿ ಚಿಟ್ಟಂಪಳ್ಳಿ ಗ್ರಾಮದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.
ಗ್ರಾಮದ ಹೊರ ವಲಯದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಗಸ್ತಿನಲ್ಲಿದ್ದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.