Categories: ತೆಲಂಗಾಣ

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 3 ಓಮಿಕ್ರಾನ್ ಕೇಸು ಪತ್ತೆ, ಒಬ್ಬ ನಾಪತ್ತೆ

ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂದಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಓಮಿಕ್ರಾನ್  ಪ್ರಕರಣಗಳು ಬುಧವಾರ ಪತ್ತೆಯಾಗಿವೆ.ಓಮಿಕ್ರಾನ್ ರೂಪಾಂತರವು ಎರಡೂವರೆ ದಿನಗಳಲ್ಲಿ ರೂಪಾಂತರಗೊಳ್ಳುವ, ಕೆಲವು ಯುರೋಪಿಯನ್ ದೇಶಗಳಲ್ಲಿ ಒಂದೂವರೆ ದಿನದಲ್ಲಿ ದ್ವಿಗುಣಗೊಳ್ಳುವ ಸಮಯವನ್ನು ಹೊಂದಿದೆ, ಕೋವಿಡ್ ಮಾರ್ಗಸೂಚಿಯನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ನಿರ್ದೇಶಕ ಡಾ ಜಿಎಸ್ ರಾವ್ ಹೇಳುತ್ತಾರೆ.

ವಿದೇಶಕ್ಕೆ ಹೋಗಿ ಬಂದವರಲ್ಲಿ ಕಂಡುಬಂದಿದ್ದು, ಅವರಲ್ಲಿ ಇಬ್ಬರು ಓಮಿಕ್ರಾನ್ ಸಂಖ್ಯೆ ಹೆಚ್ಚಿರುವ ಅಥವಾ ಅಪಾಯವಿರುವ ದೇಶಗಳಿಂದ ಬಂದವರು ಅಲ್ಲ ಎಂಬುದು ಕಳವಳಪಡುವ ಸಂಗತಿಯಾಗಿದೆ.

ಕೆನ್ಯಾದಿಂದ ಬಂದ 24 ವರ್ಷದ ಯುವತಿಯಲ್ಲಿ ಇಂದು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಪರೀಕ್ಷೆ ಮಾಡಿಸಿದಾಗ ಓಮಿಕ್ರಾನ್ ಪತ್ತೆಯಾಗಿದೆ. ಅವರನ್ನು ಟಿಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು ಅವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಆಕೆಯ ತಂದೆ ಮತ್ತು ಮಾವನನ್ನು ಟೊಲಿಚೊವ್ಲಿಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

ಮತ್ತೊಬ್ಬರು 23 ವರ್ಷದ ಸೊಮಾಲಿಯಾ ದೇಶದ ಯುವಕನಾಗಿದ್ದು ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡಿದಾಗ ಓಮಿಕ್ರಾನ್ ರೂಪಾಂತರಿ ಪಾಸಿಟಿವ್ ವೈರಸ್ ತಗುಲಿರುವುದು ಪತ್ತೆಯಾಗಿದೆ. ಆದರೆ ಇವರು ತಪ್ಪಿಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ.

ಮೂರನೇ ಪ್ರಕರಣ ಏಳು ವರ್ಷದ ಬಾಲಕನಾಗಿದ್ದು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕೋವಿಡ್ ಪರೀಕ್ಷೆಗೆ ಸ್ಯಾಂಪಲ್ ಕೊಟ್ಟು ವಿಮಾನದಲ್ಲಿ ಪಶ್ಚಿಮ ಬಂಗಾಳಕ್ಕೆ ಪೋಷಕರ ಜೊತೆ ಹೋಗಿದ್ದಾನೆ. ಪರೀಕ್ಷೆಯಲ್ಲಿ ಬಾಲಕಲ್ಲಿ ಓಮಿಕ್ರಾನ್ ಕಂಡುಬಂದಿದ್ದು ವರದಿಯನ್ನು ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ.

ತೆಲಂಗಾಣದಲ್ಲಿ ಸ್ಥಳೀಯ ಜನರಲ್ಲಿ ಇದುವರೆಗೆ ಓಮಿಕ್ರಾನ್ ಕಂಡುಬಂದಿಲ್ಲ, ತೆಲಂಗಾಣದಲ್ಲಿ ಕಂಡುಬಂದ ಎರಡೂ ಕೇಸುಗಳು ವಿದೇಶಗಳಿಂದ ಬಂದವರಲ್ಲಿ ಗೋಚರಿಸಿದೆ ಎಂದು ಹೇಳಿದ್ದಾರೆ.

Swathi MG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

48 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago