Categories: ತೆಲಂಗಾಣ

104 ಸಂಖ್ಯೆಯ ಆಂಬ್ಯುಲೆನ್ಸ್‌ ಸೇವೆ ಸ್ಥಗಿತಗೊಳಿಸಿದ ತೆಲಂಗಾಣ ಸರ್ಕಾರ

ತೆಲಂಗಾಣ: ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿದ್ದ 104 ಸೇವೆಗಳು ಇನ್ನು ಮುಂದೆ ಸ್ಥಗಿತಗೊಳ್ಳಲಿವೆ. ಫಿಕ್ಸೆಡ್ ಡೇ ಹೆಲ್ತ್ ಸರ್ವಿಸಸ್ (ಎಫ್‌ಡಿಎಚ್‌ಎಸ್) ಅಡಿಯಲ್ಲಿ ಸುಮಾರು 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 104 ವಾಹನಗಳನ್ನು ಹರಾಜು ಹಾಕಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಸರ್ಕಾರ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗುರುವಾರ ಆದೇಶ ಹೊರಡಿಸಿದ್ದು, ತೆಲಂಗಾಣ ರಾಜ್ಯದಲ್ಲಿರುವ 198 ವಾಹನಗಳನ್ನು ಹರಾಜು ಹಾಕುವಂತೆ ಸರ್ಕಾರ ಸೂಚಿಸಿದೆ.

104 ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 1250 ಸಿಬ್ಬಂದಿಯನ್ನು ಸರ್ಕಾರದ ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಸರ್ಕಾರ ನಿರ್ದೇಶನ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ವಿಶೇಷ ವೈದ್ಯಕೀಯ ಸೇವೆಗಾಗಿ 2009 ರಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾದ 104 ಆಂಬ್ಯುಲೆನ್ಸ್ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಜೀವನಶೈಲಿ ಬದಲಾವಣೆಗಳಿಗೆ ಉಚಿತ ಔಷಧಿಗಳನ್ನು ಒದಗಿಸುತ್ತಿತ್ತು.

ಪ್ರಸ್ತುತ ತೆಲಂಗಾಣ ರಾಜ್ಯದಲ್ಲಿ ‘ಜೀವನಶೈಲಿ ರೋಗ ತಡೆಗಟ್ಟುವಿಕೆ’ ಯೋಜನೆ ಪ್ರಾರಂಭವಾದಾಗಿನಿಂದ 104 ಸೇವೆಗಳಿಗೆ ಕೆಲಸ ಇಲ್ಲದಂತಾಗಿದೆ. ತೆಲಂಗಾಣ ಸರ್ಕಾರವು ಮುಂದಿನ ದಿನಗಳಲ್ಲಿ ಗ್ರಾಮೀಣ ದವಾಖಾನೆಗಳನ್ನು ತೆರೆಯುತ್ತಿರುವ ಕಾರಣದಿಂದ 104 ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಕಳೆದ ಆರು ತಿಂಗಳಿನಿಂದ 104 ಆಂಬುಲೆನ್ಸ್‌ಗಳು ಖಾಲಿ ಬಿದ್ದಿವೆ. ವಾಹನಗಳು ಚಲಿಸದ ಕಾರಣ ತುಕ್ಕು ಹಿಡಿದು ಹಾಳಾಗುತ್ತಿವೆ. ವಾಹನಗಳನ್ನು ಹರಾಜು ಹಾಕಿ ಸಿಬ್ಬಂದಿಯನ್ನು ಇತರೆ ಸೇವೆಗಳಿಗೆ ಬಳಸಿಕೊಳ್ಳುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚಿಸಿದೆ.

Sneha Gowda

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಮೂರು ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

33 seconds ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

15 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

31 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

34 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

57 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago