News Karnataka Kannada
Thursday, May 09 2024
ತೆಲಂಗಾಣ

ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ

ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿಗೆ ಒಲಿದಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು.
Photo Credit : News Kannada

ಹೈದರಾಬಾದ್: ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿಗೆ ಒಲಿದಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು.

ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಪಕ್ಷ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ. ಡಿಸೆಂಬರ್ 7ಕ್ಕೆ ರೇವಂತ್ ರೆಡ್ಡಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಲ್ಕಜ್ ಗಿರಿ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ 56 ವರ್ಷದ ರೇವಂತ್ ರೆಡ್ಡಿ ಅವರು 2017ರಲ್ಲಿ ತೆಲುಗು ದೇಶಂ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು