ತೆಲಂಗಾಣ

ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

ಹೈದರಾಬಾದ್:  ತೆಲುಗಿನ ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಜಾಮೀನು ಅರ್ಜಿಯನ್ನು ನಾಂಪಲ್ಲಿ ನ್ಯಾಯಾಲಯ ತಿರಸ್ಕರಿಸಿದೆ. ವಿಧ್ವಂಸಕ ಕೃತ್ಯ ಹಾಗೂ ಅಶಾಂತಿಗೆ ಕಾರಣ ಆಗಿದ್ದಾರೆ ಎನ್ನುವ ಕಾರಣಕ್ಕಾಗಿ ತೆಲುಗಿನ ಬಿಗ್ ಬಾಸ್ ಸೀಸನ್ 7 ರ ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದರು. ಪಲ್ಲವಿ ಪ್ರಶಾಂತ್ ಅವರ ಜೊತೆಗೆ ಸಹೋದರ ಮನೋಹರ್ ಅವರನ್ನು ಕೂಡ ಬಂಧಿಸಲಾಗಿತ್ತು. ನ್ಯಾಯಾಲಯವು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಬಿಗ್ ಬಾಸ್ ಕಂಟೆಸ್ಟೆಂಟ್ ಅಭಿಮಾನಿಗಳು ಕಿತ್ತಾಡಿಕೊಂಡ ಪ್ರಕರಣ ಹೈದರಾಬಾದ್ ನಲ್ಲಿ ಮೊನ್ನೆ ನಡೆದಿತ್ತು. ಫಿನಾಲೆ ವೇಳೆ ಸ್ಟುಡಿಯೋದಲ್ಲಿ ಗಲಾಟೆ ನಡೆದಿದ್ದು, ಕಾರು ಮತ್ತು ಬಸ್ ಗಳು ಜಖಂ ಆಗಿದ್ದವು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್ ಅವರ ಅಭಿಮಾನಿಗಳು ಆಗಮಿಸಿ ದಾಂಧಲೆ ಮಾಡಿದ್ದರು.

ಗ್ರ್ಯಾಂಡ್ ಫಿನಾಲೆಯಲ್ಲಿ ಪಲ್ಲವಿ ಪ್ರಶಾಂತ್ ವಿನ್ ಆಗಿ, ಅಮರ್ ದೀಪ್ ರನ್ನರ್ ಅಪ್ ಆಗಿ ಘೋಷಣೆ ಆಗುತ್ತಿದ್ದಂತೆಯೇ ಗಲಾಟೆ ಶುರುವಾಗಿತ್ತು. ಇಬ್ಬರ ಫ್ಯಾನ್ಸ್ ಮಾತು ವಿಕೋಪಕ್ಕೆ ಹೋದ ಕಾರಣದಿಂದಾಗಿ ಆರ್.ಟಿ.ಸಿ ಬಸ್ ಮತ್ತು ಕಾರಿನ ಗಾಜು ಪುಡಿ ಪುಡಿ ಆಗಿದೆ.
ಈ ಕುರಿತಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ ಪ್ರಶಾಂತ್ ಅವರನ್ನು ಬಂಧಿಸಿದ್ದಾರೆ.

Ramya Bolantoor

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

18 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

48 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago