Categories: ತೆಲಂಗಾಣ

ಖ್ಯಾತ ತಮಿಳು ನಟ, ಡಿಎಂಡಿಕೆ ಅಧ್ಯಕ್ಷ ‘ವಿಜಯಕಾಂತ್’ ಕೋವಿಡ್‌ಗೆ ಬಲಿ

ಚೆನೈ: ಕೋವಿಡ್ ಪಾಸಿಟಿವ್ ಬಂದ ನಂತರ ವೆಂಟಿಲೇಟರ್ನಲ್ಲಿದ್ದ ನಟ ವಿಜಯಕಾಂತ್ (71) ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜ್ವರ, ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ನವೆಂಬರ್ 18 ರಂದು ರಾಮಪುರಂನ ಮಿಯಾಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಜಯ್ ಕಾಂತ್ ಅವರಿಗೆ ನ್ಯುಮೋನಿಯಾ ಇದ್ದಿದ್ದರಿಂದ ವೆಂಟಿಲೇಟರ್​ ಸಪೋರ್ಟ್​ ನೀಡಲಾಗಿತ್ತು. ಅವರನ್ನು ಉಳಿಸಿಕೊಳ್ಳಲು ಆಸ್ಪತ್ರೆಯ ವೈದ್ಯಕೀಯ ತಂಡ ಎಲ್ಲ ರೀತಿಯಿಂದಲೂ ಪ್ರಯತ್ನಿಸಲಾಯಿತು. ಕೊನೆಗೂ ಉಳಿಸಿಕೊಳ್ಳಲು ಆಗಲಿಲ್ಲ. ನಿನ್ನೆ ಅವರಿಗೆ ಉಸಿರಾಟದ ಸಮಸ್ಯೆ ತೀವ್ರವಾಗಿತ್ತು. ಹೀಗಾಗಿ ಡಯೋಗ್ನಸ್ಟಿಕ್​ ಟೆಸ್ಟ್ ಮಾಡಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದು ಮಿಯಾಟ್  ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಸಿನಿಮಾಗಳಲ್ಲಿ ಹೆಚ್ಚಾಗಿ ಮಿಲಿಟರಿ ಪಾತ್ರದಲ್ಲಿ ಅಭಿನಯಿಸಿದ್ದರಿಂದ ಜನರು ಪ್ರೀತಿಯಿಂದ ವಿಜಯ್ ಕಾಂತ್ ಅವರಿಗೆ ಕ್ಯಾಪ್ಟನ್ ಎನ್ನುತ್ತಿದ್ದರು. ಇವರು ಸುಮಾರು 150ಕ್ಕೂ ಹೆಚ್ಚು ತಮಿಳು ಸಿನಿಮಾಗಳಲ್ಲಿ ನಟನೆ ಮಾಡಿ ಅಪಾರ ಅಭಿಮಾನವನ್ನು ಗಳಿಸಿದ್ದರು. ಅಲ್ಲದೇ ಸಿನಿಮಾಗಳಲ್ಲಿ ತಮ್ಮದೇ ಸಾಧನೆ ಕೂಡ ಮಾಡಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಸಿನಿಮಾದಲ್ಲಿ ಯಶಸ್ಸು ಇದ್ದರು ತಮಿಳುನಾಡಿನ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. 2005ರಲ್ಲಿ ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ (DMDK) ಪಕ್ಷವನ್ನು ಸ್ಥಾಪನೆ ಮಾಡಿದರು.

Ashitha S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago