ತೆಲಂಗಾಣ

ತೆಲಂಗಾಣದಲ್ಲಿ ಫಾಕ್ಸ್‌ ಕಾನ್‌ ಸ್ಥಾವರ: ಕಂಪನಿ ಅಧ್ಯಕ್ಷ ಲಿಯು ಸ್ಪಷ್ಟನೆ

ಹೈದರಾಬಾದ್: ಕಳೆದ ವಾರ ಹೈದರಾಬಾದ್‌ನಲ್ಲಿದ್ದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಪತ್ರ ಬರೆದಿದ್ದು, ತೆಲಂಗಾಣದಲ್ಲಿ ತನ್ನ ಸ್ಥಾವರವನ್ನು ಸ್ಥಾಪಿಸಲು ಬದ್ಧವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಮಾರ್ಚ್ 2 ರಂದು ತೆಲಂಗಾಣ ಸಿಎಂ ಅವರೊಂದಿಗೆ ಚರ್ಚಿಸಿದಂತೆ, ಕೊಂಗರ ಕಲಾನ್‌ನಲ್ಲಿ ಉತ್ಪಾದನಾ ಸೌಲಭ್ಯವನ್ನು ಸ್ಥಾಪಿಸಲು ಫಾಕ್ಸ್‌ಕಾನ್ ಬದ್ಧವಾಗಿದೆ ಮತ್ತು ಕೊಂಗರ ಕಲಾನ್ ಪಾರ್ಕ್ ಅನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಸರ್ಕಾರದ ಅಗತ್ಯ ಬೆಂಬಲದ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ.

ಹೈದರಾಬಾದ್‌ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಕೊಂಗರ ಕಲಾನ್‌ನಲ್ಲಿ ಸ್ಥಾವರವನ್ನು ಸ್ಥಾಪಿಸಲು ಫಾಕ್ಸ್‌ಕಾನ್‌ಗೆ ರಾಜ್ಯ ಸರ್ಕಾರ 200 ಎಕರೆ ಭೂಮಿಯನ್ನು ನೀಡಿದೆ ಎಂದು ವರದಿಯಾಗಿದೆ. ಕೆಸಿಆರ್ ಅವರು ತೈವಾನ್‌ಗೆ ಭೇಟಿ ನೀಡುವಂತೆ ಲಿಯು ಆಹ್ವಾನಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿ ಸಿಎಂಒ ಬಿಡುಗಡೆ ಮಾಡಿದೆ.

ಫಾಕ್ಸ್‌ಕಾನ್ ಭಾರತದಲ್ಲಿ ಯಾವುದೇ ಹೂಡಿಕೆಗಳನ್ನು ಮಾಡುವುದಿಲ್ಲ ಎಂಬ ವರದಿಗಳ ಮಧ್ಯೆ ಈ ಹೇಳಿಕೆ ಹೊರಬಂದಿರುವುದು ಪ್ರಾಮುಖ್ಯತೆ ಪಡೆದಿದೆ. ಹೈದರಾಬಾದ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ತನಗೆ ಮತ್ತು ತನ್ನ ತಂಡಕ್ಕೆ ನೀಡಿದ ಆತಿಥ್ಯಕ್ಕಾಗಿ ಕೆಸಿಆರ್‌ಗೆ ಫಾಕ್ಸ್‌ಕಾನ್ ಅಧ್ಯಕ್ಷ ಧನ್ಯವಾದ ತಿಳಿಸಿದ್ದಾರೆ. “ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮತೆಲಂಗಾಣದ ಪರಿವರ್ತನೆ ಮತ್ತು ಅಭಿವೃದ್ಧಿಯ ಪ್ರಯತ್ನಗಳಿಂದ ಸ್ಫೂರ್ತಿ ಪಡೆದಿದ್ದೇನೆ. ನನಗೆ ಭಾರತದಲ್ಲಿ ಹೊಸ ಸ್ನೇಹಿತ ದೊರೆತಂತಾಗಿದೆ. ನಾನು ಭವಿಷ್ಯದಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಲಿಯು ತಿಳಿಸಿದ್ದಾರೆ.

Ashika S

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

13 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

36 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

55 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago