ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅರ್ಮೂರ್ ಮಂಡಲದ ಚೆಪುರ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ.
ಮೃತರನ್ನು ನಂದಿಪೇಟೆ ನಿವಾಸಿಗಳಾದ ಅಶೋಕ್, ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ.
ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನ ಅವಶೇಷಗಳಿಂದ ಶವಗಳನ್ನು ಹೊರತೆಗೆದರು.