ಹೈದರಾಬಾದ್: ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್ ನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಪುದೂರಿನ ಉಕ್ಕಿನ ಕಾರ್ಖಾನೆಯ ಬಳಿ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಕುಳಿತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಜಹೀರಾ ಬೀ (68), ಜಾವೇದ್ (12) ಮತ್ತು ಒಮರ್ (6) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು.
ಅತಿವೇಗದಲ್ಲಿ ಚಲಿಸುತ್ತಿದ್ದ ಕಾರು ಹಿಂದಿನಿಂದ ಬಂದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಮುಂದೆ ಚಲಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.