ಹೈದರಾಬಾದ್: ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ. ಕವಿತಾ ಅವರಿಗೆ ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆ ಹಾಗೂ ಆರೋಪದಲ್ಲಿ ಇಡಿ ಅಧಿಕಾರಿಗಳು ಮೆಗಾ ರೇಡ್ ಮಾಡಿ ಬಂಧಿಸಿದ್ದಾರೆ.
ಹೈದರಾಬಾದ್ನಲ್ಲಿರುವ ಕೆ.ಕವಿತಾ ಅವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಆರ್ಎಸ್ ಪಕ್ಷದ ಎಂಎಲ್ಸಿಯೂ ಆಗಿರುವ ಕವಿತಾ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಅವರಿಗೆ ಕಳೆದ ಜನವರಿಯಲ್ಲೇ ಇಡಿ ನೋಟಿಸ್ ಜಾರಿ ಮಾಡಿತ್ತು.
ಬಿಆರ್ಎಸ್ ನಾಯಕಿ ಕವಿತಾ ಅವರು ಜನವರಿ 16ರಂದೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಡಿ ಅಧಿಕಾರಿಗಳು ನೀಡಿದ್ದ ಎರಡು ನೋಟಿಸ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆ. ಕವಿತಾ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲನೆ ಮಾಡಿದ್ದಾರೆ.