News Karnataka Kannada
Friday, May 17 2024
ತೆಲಂಗಾಣ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Spanish woman gang-raped
Photo Credit : IANS

ಹೈದರಾಬಾದ್: 16 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ರಾಚಕೊಂಡ ಪೊಲೀಸ್ ಕಮಿಷನರೇಟ್ ನ ಮೀರ್ಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಂದನವನಂ ಕಾಲೋನಿಯಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಸಂತ್ರಸ್ತೆಯ ಮನೆಗೆ ನುಗ್ಗಿದ ಆರೋಪಿ, ಆಕೆಯ ಸಹೋದರ ಮತ್ತು ಇತರ ಮೂವರು ಮಕ್ಕಳಿಗೆ ಬೆದರಿಕೆ ಹಾಕಿದ ನಂತರ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಸಂತ್ರಸ್ತೆ ನೀಡಿದ ಪೊಲೀಸ್ ದೂರಿನ ಪ್ರಕಾರ, ಎಂಟು ಯುವಕರ ಗುಂಪು ಮನೆಗೆ ನುಗ್ಗಿದೆ. ನಾಲ್ವರು ಆರೋಪಿಗಳು ಸಂತ್ರಸ್ತೆಯನ್ನು ಕಟ್ಟಡದ ಮೂರನೇ ಮಹಡಿಗೆ ಕರೆದೊಯ್ದರೆ, ಉಳಿದವರು ಆಕೆಯ ಸಹೋದರ ಮತ್ತು ಮನೆಯಲ್ಲಿದ್ದ ಇತರ ಮೂವರು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ.

ಸಂತ್ರಸ್ತೆಯನ್ನು ಮಹಡಿಗೆ ಕರೆದೊಯ್ದ ನಾಲ್ವರು ಆರೋಪಿಗಳಲ್ಲಿ ಮೂವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.  ಬಾಲಕಿ ಸಹಾಯಕ್ಕಾಗಿ ಕಿರುಚಿಕೊಂಡಾಗ ಯುವಕರು ಓಡಿಹೋಗಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸಖಿ ಕೇಂದ್ರಕ್ಕೆ ಕಳುಹಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಏಳು ತಂಡಗಳನ್ನು ರಚಿಸಿದ್ದಾರೆ. ಅಪರಾಧಿಗಳನ್ನು ಪತ್ತೆಹಚ್ಚುವ ಪ್ರಯತ್ನದ ಭಾಗವಾಗಿ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಘಟನಾ ಸ್ಥಳಕ್ಕೆ ರಾಚಕೊಂಡ ಪೊಲೀಸ್ ಆಯುಕ್ತ ಡಿ.ಎಸ್.ಚೌಹಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಶಂಕಿತರನ್ನು ವಿಚಾರಣೆ ನಡೆಸಿದಾಗ ಅವರು ಗಾಂಜಾದ ಅಮಲಿನಲ್ಲಿದ್ದರು ಎಂಬುದು ತಿಳಿದು ಬಂದಿದೆ.

ಸಂತ್ರಸ್ತೆ ದಲಿತಳಾಗಿದ್ದು, ದಿಲ್ಸುಖ್ ನಗರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಕೆಲವು ತಿಂಗಳ ಹಿಂದೆ ಪೋಷಕರನ್ನು ಕಳೆದುಕೊಂಡ ಈ ಮಕ್ಕಳು ಕಾಲೋನಿಗೆ ಸ್ಥಳಾಂತರಗೊಂಡು ಸಂಬಂಧಿಕರೊಂದಿಗೆ ವಾಸಿಸುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು