News Karnataka Kannada
Saturday, April 20 2024
Cricket
ತೆಲಂಗಾಣ

ಬಹು ನಿರೀಕ್ಷಿತ ʼಪುಷ್ಪ 2ʼ ಚಿತ್ರದ ಟೀಸರ್‌ ರಿಲೀಸ್‌ ಡೇಟ್‌ ಫಿಕ್ಸ್‌

ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌, ಅಲ್ಲು ನಟನೆಯ ಬಹುನಿರೀಕ್ಷಿತ ಚಿತ್ರ ʼಪುಷ್ಪ 2ʼ ಟೀಸರ್‌ ರಿಲೀಸ್‌ ಗೆ ರೆಡಿಯಾಗಿದೆ.
Photo Credit : NewsKarnataka

ಹೈದರಾಬಾದ್‌: ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌, ಅಲ್ಲು ನಟನೆಯ ಬಹುನಿರೀಕ್ಷಿತ ಚಿತ್ರ ʼಪುಷ್ಪ 2ʼ ಟೀಸರ್‌ ರಿಲೀಸ್‌ ಗೆ ರೆಡಿಯಾಗಿದೆ.ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿರುವ ಈ ಅಲ್ಲು ಅರ್ಜುನ್‌ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯದ ಚಿತ್ರ ಈಗಾಗಲೇ ದೇಶಾದ್ಯಂತ ನಿರೀಕ್ಷೆ ಹುಟ್ಟು ಹಾಕಿದೆ. ಸುಕುಮಾರ್‌ ಈ ‘ಪುಷ್ಪ 2: ದಿ ರೂಲ್’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇದೀಗ ಚಿತ್ರ ತಂಡ ಬಹು ಮುಖ್ಯ ಅಪ್‌ಡೇಟ್‌ ತಿಳಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ಹೊಸ ಪೋಸ್ಟರ್‌ ಹಂಚಿಕೊಂಡು ಟೀಸರ್‌ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

ಚಿತ್ರದ ನಾಯಕ ಅಲ್ಲು ಅರ್ಜುನ್‌ ಅವರ ಹುಟ್ಟುಹಬ್ಬವಾದ ಏಪ್ರಿಲ್‌ 8ರಂದು ʼಪುಷ್ಪ 2ʼ ಸಿನಿಮಾದ ಟೀಸರ್‌ ಬಿಡುಗಡೆಯಾಗಲಿದೆ. ಆ ಮೂಲಕ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ʼʼಪುಷ್ಪ ಮಾಸ್‌ ಜಾತ್ರೆ ಆರಂಭವಾಗಲು ದಿನಾಂಕ ನಿಗದಿಯಾಗಿದೆ. ʼಪುಷ್ಪ 2: ದಿ ರೂಲ್‌ʼ ಚಿತ್ರದ ಟೀಸರ್‌ ಏಪ್ರಿಲ್‌ 8ರಂದು ಹೊರ ಬರಲಿದೆ. ಈತ (ಪುಷ್ಪ) ಇನ್ನಷ್ಟು ಶಕ್ತಿಯೊಂದಿಗೆ ನಿಮ್ಮ ಮುಂದೆ ಬರಲಿದ್ದಾನೆ. ʼಪುಷ್ಪ 2ʼ ಸಿನಿಮಾ ವಿಶ್ವಾದ್ಯಂತ 2024ರ ಆಗಸ್ಟ್‌ 15ರಂದು ತೆರೆಗೆ ಬರಲಿದೆʼʼ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು