ಹೈದರಾಬಾದ್: ಪಂಚ ರಾಜ್ಯ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚಿಸಿದೆ. ಇದೀಗ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ತೆಲಂಗಾಣ ರಾಜ್ಯಪಾಲೆ ತಮಿಳ್ಸಾಯಿ ಸೌಂದರ್ಯರಾಜನ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಜೊತೆ 12 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎಲ್ಬಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿಮಾಚಲ ಪ್ರದೇಶ ಸಿಎಂ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
LIVE : తెలంగాణ రాష్ట్ర ముఖ్యమంత్రిగా రేవంత్ రెడ్డి గారి ప్రమాణస్వీకారం
https://t.co/xZAkFiESF1— Revanth Reddy (@revanth_anumula) December 7, 2023