News Karnataka Kannada
Friday, May 10 2024
ತೆಲಂಗಾಣ

ತೆಲಂಗಾಣ ವಿಧಾನಸಭೆ ಚುನಾವಣೆ: ಬೆಳಗ್ಗೆ ಶೇ.8.52ರಷ್ಟು ಮತದಾನ

ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳಿಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮುಂದುವರಿಯುತ್ತಿದೆ. ಬೆಳಗ್ಗೆ 9 ಗಂಟೆಯವರೆಗೆ ಶೇಕಡಾ 8.33ರಷ್ಟು ಮತದಾನವಾಗಿದೆ. ತೆಲಂಗಾಣದ ಆಡಳಿತಾರೂಢ ಬಿಆರ್ಎಸ್ ಎಲ್ಲಾ 119 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
Photo Credit : News Kannada

ಹೈದರಾಬಾದ್: ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳಿಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮುಂದುವರಿಯುತ್ತಿದೆ.
ಬೆಳಗ್ಗೆ 9 ಗಂಟೆಯವರೆಗೆ ಶೇಕಡಾ 8.33ರಷ್ಟು ಮತದಾನವಾಗಿದೆ. ತೆಲಂಗಾಣದ ಆಡಳಿತಾರೂಢ ಬಿಆರ್ಎಸ್ ಎಲ್ಲಾ 119 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಸಿಪಿಐಗೆ ಒಂದು ಸ್ಥಾನವನ್ನು ನೀಡಿ 118 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ನಗರದ ಒಂಬತ್ತು ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದೆ.

ಇನ್ನು 119 ಕ್ಷೇತ್ರಗಳಲ್ಲಿ 2,290 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, 221 ಮಹಿಳಾ ಮತ್ತು ಒಬ್ಬರು ತೃತೀಯ ಲಿಂಗಿ ಸ್ಪರ್ಧಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 3ಕ್ಕೆ ಮತ ಎಣಿಕೆಯಾಗಿದ್ದು ಅಂದೇ ರಾಜಸ್ತಾನ, ಮಧ್ಯ ಪ್ರದೇಶ, ಛತ್ತೀಸ್ ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ   ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಇಂದು ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ತೆಲಂಗಾಣದ ನನ್ನ ಸಹೋದರ, ಸಹೋದರಿಯರಿಗೆ ಮನವಿ ಮಾಡುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ, ಪತ್ನಿ ಸುರೇಖಾ ಹಾಗೂ ಮಗಳು ಶ್ರೀಜಾ ಅವರೊಂದಿಗೆ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಆಗಮಿಸಿದರು. ಸರತಿ ಸಾಲಿನಲ್ಲಿ ನಿಂತು ಅವರು ಮತ ಚಲಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು