Categories: ತೆಲಂಗಾಣ

ತೆಲಂಗಾಣದಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು

ಹೈದರಾಬಾದ್: ತೆಲಂಗಾಣದ ಕೆಲವು ಭಾಗಗಳಲ್ಲಿ ಉಷ್ಣತೆ ಹೆಚ್ಚಿದ್ದು, ಬುಧವಾರ ಗರಿಷ್ಠ ತಾಪಮಾನ 46 ಡಿಗ್ರಿ ಸೆಲ್ಸಿಯಸ್ ದಾಟಿದೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿ ಪ್ರಕಾರ, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜುಲುರ್‌ಪಾಡ್‌ನಲ್ಲಿ ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಖಾನಾಪುರ ಪಿ.ಎಸ್. ಖಮ್ಮಂ, ಮಹಬೂಬ್‌ನಗರದ ಬಯ್ಯಾರಂ ಮತ್ತು ಭದ್ರಾದ್ರಿ ಕೊತಗುಡೆಂನ ಗರಿಮೆಲ್ಲಪದವಿನಲ್ಲಿ 45.4 ಡಿಗ್ರಿ ಸೆಲ್ಸಿಯಸ್‌ ತಾಪಮಾನವನ್ನು ದಾಖಲಿಸಿದೆ. ಭೂಪಾಲಪಲ್ಲಿ ಮತ್ತು ಖಮ್ಮಂ ಜಿಲ್ಲೆಗಳ ಕೆಲವೆಡೆ 44 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಮತ್ತು ಅದಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೈದರಾಬಾದ್‌ನ ಹವಾಮಾನ ಕೇಂದ್ರದ ಮುಖ್ಯಸ್ಥರಾದ ಡಾ.ಕೆ.ನಾಗ ರತ್ನ ತಿಳಿಸಿದ್ದಾರೆ.

ಉತ್ತರ ಮತ್ತು ಈಶಾನ್ಯ ತೆಲಂಗಾಣದಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿಗಿಂತ ಹೆಚ್ಚಿರುತ್ತದೆ. ಹೈದರಾಬಾದ್ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗರಿಷ್ಠ 38-40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಏತನ್ಮಧ್ಯೆ, ಶಾಖದ ಅಲೆಯ ಪರಿಸ್ಥಿತಿಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Gayathri SG

Recent Posts

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

5 mins ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

7 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

8 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

8 hours ago