Categories: ತೆಲಂಗಾಣ

ಹೈದರಾಬಾದ್: 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಏ.14ರಂದು ಅನಾವರಣ

ಹೈದರಾಬಾದ್, ಏ.5: ಡಾ.ಬಿ.ಆರ್.ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅವರ ಜನ್ಮದಿನವಾದ ಏಪ್ರಿಲ್ 14ರಂದು ಹೈದರಾಬಾದ್ ನಲ್ಲಿ ಅನಾವರಣಗೊಳಿಸಲಾಗುವುದು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನಗರದ ಹೃದಯಭಾಗದಲ್ಲಿರುವ ಹುಸೇನ್ ಸಾಗರ್ ಸರೋವರದ ಬಳಿ ಅಂಬೇಡ್ಕರ್ ಅವರ ಅತಿ ಎತ್ತರದ ಕಂಚಿನ ಪ್ರತಿಮೆ  ಅನಾವರಣಗೊಳಿಸಲಿದ್ದಾರೆ.

ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಸರ್ಕಾರ ಆಹ್ವಾನಿಸಿದೆ.

ಭಾರತೀಯ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಲು ಅನಾವರಣದ ಸಮಯದಲ್ಲಿ ಪ್ರತಿಮೆಯ ಮೇಲೆ ವಿಶೇಷ ಹೆಲಿಕಾಪ್ಟರ್ ನಿಂದ ಹೂವುಗಳನ್ನು ಸುರಿಸಲಾಗುವುದು. ಸಮಾರಂಭಕ್ಕೆ ಬೌದ್ಧ ಸನ್ಯಾಸಿಗಳನ್ನು ಮಾತ್ರ ಆಹ್ವಾನಿಸಲಾಗುವುದು.

ಅನಾವರಣ ಸಮಾರಂಭದ ನಂತರ ಸಾರ್ವಜನಿಕ ಸಭೆ ನಡೆಯಲಿದೆ. ಮುಖ್ಯಮಂತ್ರಿ ಕೆಸಿಆರ್, ಪ್ರಕಾಶ್ ಅಂಬೇಡ್ಕರ್ ಮತ್ತು ರಾಜ್ಯ ಕಲ್ಯಾಣ ಸಚಿವ ಕೊಪ್ಪುಲ ಈಶ್ವರ್ ಅವರು ಭಾಷಣ ಮಾಡಲಿದ್ದಾರೆ.

ಎಲ್ಲಾ 119 ಕ್ಷೇತ್ರಗಳಿಂದ 35,700 ಜನರು ಮತ್ತು ಪ್ರತಿ ಕ್ಷೇತ್ರದಿಂದ 300 ಜನರು ಸಮಾರಂಭದಲ್ಲಿ ಭಾಗವಹಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು. ರಸ್ತೆ ಸಾರಿಗೆ ನಿಗಮದ ಒಟ್ಟು 750 ಬಸ್ಸುಗಳನ್ನು   ಕಾಯ್ದಿರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಒಂದು ಲಕ್ಷ ಸಿಹಿ ಪ್ಯಾಕೆಟ್ ಗಳು, ಒಂದೂವರೆ ಲಕ್ಷ ಮಜ್ಜಿಗೆ ಪ್ಯಾಕೆಟ್  ಮತ್ತು ನೀರಿನ ಪ್ಯಾಕೆಟ್ ಗಳನ್ನು ವಿತರಿಸಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.

 

Gayathri SG

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

3 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

4 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

4 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

4 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

4 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

6 hours ago