News Karnataka Kannada
Tuesday, May 07 2024
ತೆಲಂಗಾಣ

ಬಿಜೆಪಿ ತ್ಯಜಿಸಿದ ಹಿರಿಯ ನಟಿ ವಿಜಯಶಾಂತಿ

Veteran actress Vijayashanti quits BJP
Photo Credit : News Kannada

ಹೈದ್ರಾಬಾದ್: ಕರ್ನಾಟಕದಲ್ಲಿ ಜಗದೀಶ ಶೆಟ್ಟರ್‌ ಸೇರಿದಂತೆ ಹಲವು ಘಟಾನುಘಟಿ ನಾಯಕರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಅದೇ ರೀತಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಯಾವುದೇ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. 2009ರಲ್ಲಿ ತನ್ನ ರಾಜಕೀಯ ವೃತ್ತಿಜೀವನ ಆರಂಭಿಸಿದ ನಟಿ- ರಾಜಕಾರಣಿ ಬಿಆರ್ ಎಸ್ ಟಿಕೆಟ್ ನಿಂದ ಮೇದಕ್ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಅವರು ಕಾಂಗ್ರೆಸ್ ಸೇರಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ವಿಜಯಶಾಂತಿ 2020 ರಲ್ಲಿ ಬಿಜೆಪಿ ಸೇರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು