News Karnataka Kannada
Wednesday, May 01 2024
ತೆಲಂಗಾಣ

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದ ಲಾರಿ: ವಿಡಿಯೋ ವೈರಲ್

ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Photo Credit : NewsKarnataka

ಹೈದರಾಬಾದ್: ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಬೈಕ್ ಅನ್ನು ಎಳೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು