ತೆಲಂಗಾಣ: ಕರೀಂನಗರ ಜಿಲ್ಲೆಯಲ್ಲಿ ಓರ್ವ ಮಹಿಳೆ ಕೋಲಾಟ ಆಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಮೃತ ಮಹಿಳೆ ರಾಜಮಣಿ(40 ವರ್ಷ) ಶಂಕರಪಟ್ಟಣಂ ಮಂಡಲ್ನ ಕಲಾವಾಲಾ ಗ್ರಾಮದವರು ಎಂದು ತಿಳಿದುಬಂದಿದೆ. ಈಕೆ ತನ್ನ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಡ್ಯಾನ್ಸ್ ಮಾಡುತ್ತಾ ಕುಸಿದ ಬಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಕರ ಸಂಕ್ರಾತಿ ಹಬ್ಬದಂದು ಕೋಲಾಟ ಮಾಡುವ ವೇಳೆ ಈ ಘಟನೆ ನಡೆದಿದೆ.