News Karnataka Kannada
Thursday, May 02 2024
ದೇಶ

ಎನ್​ಕೌಂಟರ್​ನಲ್ಲಿ ಭಯೋತ್ಪಾದಕನ ಹತ್ಯೆ: ಬಿಎಸ್​ಎಫ್ ಯೋಧರೊಬ್ಬರಿಗೆ ಗಾಯ

Shof
Photo Credit :

ಶೋಪಿಯಾನ್: ಶೋಪಿಯಾನ್ನಲ್ಲಿ ನಡೆದ  ಎನ್‌ಕೌಂಟರ್‌ನಲ್ಲಿ ಓರ್ವ ಟಿಆರ್‌ಎಫ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿ ಎಸ್‌ ಎಫ್‌ ಯೋಧರೊಬ್ಬರಿಗೆ ಗಾಯವಾಗಿದೆ. ಇನ್ನು ಭಯೋತ್ಪಾದಕನಿಂದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್‌ನ ಕಟೋಹ್ಲಾನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ತೀವ್ರ ಕಟ್ಟೆಚ್ಚರವಹಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು