ಕೊಚ್ಚಿ: ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ಸೋಮವಾರ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ಸೃಷ್ಟಿಯಾಯಿತು.
ನಂತರ ಪ್ರಯಾಣಿಕರು ಮತ್ತು ಲಗೇಜ್ಗಳನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ನಡೆಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ. ಬಳಿಕ ವಿಮಾನ ಮರು ಹಾರಾಟಕ್ಕೆ ಅನುಮತಿ ನೀಡಲಾಯಿತು.
ಸ್ಥಳೀಯ ಪೊಲೀಸರು ಹುಸಿ ಬೆದರಿಕೆ ಕರೆ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ.