Categories: ದೇಶ

ಇಂದು ಮಧ್ಯಪ್ರದೇಶ ಹಾಗೂ ಛತ್ತೀಸ್​ಗಢ ಚುನಾವಣೆ

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 252 ಮಹಿಳೆಯರು ಸೇರಿದಂತೆ ಒಟ್ಟು 2,533 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಛತ್ತೀಸ್‌ಗಢದಲ್ಲಿ ಎರಡನೇ ಮತ್ತು ಕೊನೆಯ ಹಂತದಲ್ಲಿ 70 ಸ್ಥಾನಗಳಿಗೂ ಮತದಾನ ನಡೆಯಲಿದೆ. ನವೆಂಬರ್ 7 ರಂದು 20 ಸ್ಥಾನಗಳಿಗೆ ಮತದಾನ ನಡೆದಿದೆ.

ರಾಜ್ಯದ 70 ಸ್ಥಾನಗಳಲ್ಲಿ 958 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇನ್ನು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಸಂಪೂರ್ಣ ಒತ್ತು ನೀಡಿದೆ. ಆದರೆ ಪ್ರಚಾರದಲ್ಲಿ ಬಿಜೆಪಿ ಕಾಂಗ್ರೆಸ್​ಗಿಂತ ಮೇಲುಗೈ ಸಾಧಿಸಿದೆ.

ಇದೀಗ ಇಂದು ನಡೆಯಲಿರುವ ಮತದಾನದಲ್ಲಿ ಮತದಾರರು ತಮ್ಮ ನಿರ್ಧಾರವನ್ನು ಇವಿಎಂಗಳಲ್ಲಿ ಮುದ್ರೆ ಹಾಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ 36 ಸಭೆಗಳನ್ನು ನಡೆಸಿದ್ದು, ರಾಹುಲ್ ಮತ್ತು ಪ್ರಿಯಾಂಕಾ 21 ಸಭೆಗಳನ್ನು ನಡೆಸಿದ್ದಾರೆ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

10 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

23 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

36 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

52 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago