ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ.
ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು ಅವಲಂಬಿಸಿ ಕೆಜಿಗೆ 60-120 ರೂ.ವರೆಗೆ ಮಾರಾಟವಾಗಿದೆ. ಪ್ರಮುಖ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಕಡಿಮೆಯಾದ ಕಾರಣ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದೆ. ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಆಜಾದ್ಪುರ ಟೊಮೆಟೊ ಸಂಘದ ಅಧ್ಯಕ್ಷ ಅಶೋಕ್ ಕೌಶಿಕ್ ತಿಳಿಸಿದ್ದಾರೆ.