ಅಗರ್ತಲ,ನ.22 :ತ್ರಿಪುರ ರಾಜ್ಯದ ಅಗರ್ತಲಾದ ಮಹಾರಾಜ ಬಿರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಬ್ಯಾಗ್ವೊಂದು ಪತ್ತೆಯಾಗಿದ್ದು, ಸ್ಪೋಟಕಗಳಿರುವ ಶಂಕೆ ಮೇರೆಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಕಾರಿಗಳು ತಿಳಿಸಿದ್ದಾರೆ.
ಬಾಂಬ್ ಸ್ಕ್ವಾಡ್ ಮತ್ತು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸ್ಫೋಟಕಗಳನ್ನು ಪತ್ತೆ ಮಾಡಲು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಪರಿಶೀಲನೆ ನಂತರ ಸತ್ಯಾಂಶ ತಿಳಿಸಲಾಗುವುದು ಎಂದು ವಿಮಾನ ನಿಲ್ದಾಣದ ವ್ಯವಸ್ಥಾಪಕ ಜೆಂಪು ಹೊಕಿಪ್ ತಿಳಿಸಿದ್ದಾರೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಂಡವು ಇಡೀ ಆವರಣವನ್ನು ಸುತ್ತುವರೆದಿದೆ. ಪ್ರವೇಶ-ನಿರ್ಗಮನ ಮಾರ್ಗಗಳನ್ನು ಮಾರ್ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.