ಅಗರ್ತಲಾ: ತೀವ್ರ ತಾಪಮಾನ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಮಂಗಳವಾರದಿಂದ ಆರು ದಿನಗಳ ಕಾಲ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು ಮುಚ್ಚುವುದಾಗಿ ತ್ರಿಪುರ ಸರ್ಕಾರ ಸೋಮವಾರ ಘೋಷಿಸಿದೆ.
ಶಾಲಾ ಮಕ್ಕಳ ಆರೋಗ್ಯ ಪರಿಗಣಿಸಿ ಏಪ್ರಿಲ್ 18 ರಿಂದ 23 ರವರೆಗೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು ಸರ್ಕಾರ ಮುಚ್ಚಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಇದೇ ಅವಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸರ್ಕಾರ ಅಧಿಕಾರಿಗಳಿಗೆ ಮನವಿ ಮಾಡಿದೆ.